ಶ್ರೀಶೈಲದಲ್ಲಿ ನೀರಿಗಾಗಿ ಗಲಾಟೆ ಬಾಗಲಕೋಟೆ ಯುವಕ ಸಾವು !

ಬಾಗಲಕೋಟೆ: ಶ್ರೀಶೈಲ ಮಲ್ಲಿಕಾರ್ಜುನ ದೇವಸ್ಥಾನ ಆವರಣದಲ್ಲಿ ಬುಧವಾರ ರಾತ್ರಿ ಕ್ಷುಲ್ಲಕ ಕಾರಣಕ್ಕೆ ಸ್ಥಳೀಯರು ಮತ್ತು ಕನ್ನಡಿಗರ ನಡುವೆ ಶುರುವಾದ ಜಗಳ ವಿಕೋಪಕ್ಕೆ ತಿರುಗಿತ್ತು. ಘಟನೆಯಲ್ಲಿ ಕರ್ನಾಟಕ ಮೂಲ‌ದ 200ಕ್ಕೂ ಹೆಚ್ಚು ವಾಹನಗಳ ಗ್ಲಾಸ್​ಗಳು ಜಖಂ ಆಗಿವೆ.

ಹಲವರು ಗಾಯಗೊಂಡಿದ್ದಾರೆ.

ಕುಡಿವ ನೀರಿನ ಬಾಟಲಿ ವಿಚಾರಕ್ಕೆ ಉಂಟಾದ ಜಗಳದಲ್ಲಿ ಆಂಧ್ರ ಮೂಲದ‌ ವ್ಯಾಪಾರಸ್ಥರು ಹಾಗೂ ಸ್ಥಳೀಯರಿಂದ ಕರ್ನಾಟಕ ಭಕ್ತರ ಮೇಲೆ ಹಲ್ಲೆ ನಡೆದಿದೆ. ಲಾಠಿ ಹಾಗೂ ಮಾರಕಾಸ್ತ್ರ ಹಿಡಿದು ಹೊಡೆದಾಡುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಬಾಗಲಕೋಟೆ, ಬೆಳಗಾವಿ ಸೇರಿದಂತೆ ವಿವಿಧ ಜಿಲ್ಲೆಗಳ ಭಕ್ತರ ಮೇಲೆ ಹಲ್ಲೆ ನಡೆದಿದ್ದು, ಕೆಲವರನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಶ್ರೀಶೈಲದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಸ್ಥಳಕ್ಕೆ ಭೇಟಿ ನೀಡಿದ ಶ್ರೀಶೈಲ ಪೀಠಾಧಿಪತಿ ಶ್ರೀ ಚೆನ್ನಸಿದ್ದರಾಮ ಪಂಡಿತಾರಾಧ್ಯ ಸ್ವಾಮೀಜಿ ಅವರು ಪರಿಸ್ಥಿತಿಯನ್ನು ತಿಳಿಗೊಳಿಸಿದರು. ಪೊಲೀಸ್​ ಬಂದೋಬಸ್ತ್​ ಮಾಡಲಾಗಿದೆ.


ವರದಿ. ಪರ್ವ ನ್ಯೂಸ್ ಕನ್ನಡ.

ಕಾಮೆಂಟ್‌ಗಳು